ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಿಂದ 50 ಲಕ್ಷ ರೂ. ಚೆಕ್‌ ಹಸ್ತಾಂತರ

ಶಿವಮೊಗ್ಗ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಲಾಗಿದೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಚೆಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು.

ಸಹಕಾರ ಸಚಿವ ಕೆ.ಎನ್.ರಾಜಣ್ಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಇದ್ದರು.

Source: https://shivamoggalive.com/news/dcc-bank-fund-to-cm-relief/